ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆಗೆ ಹೊರಟ ಒಂದೇ ಕುಟುಂಬದ 10 ಮಂದಿಗೆ ಲಾರಿ ರೂಪದಲ್ಲಿ ಸಾವು ಎದುರಾಗಿದೆ!
ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೊಗೆ ಲಾರಿ ಡಿಕ್ಕಿ ಹೊಡೆದ ಕಾರಣ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ.
ಸೊರೆಮ್ ಗ್ರಾಮದ ಸಾಹು ಕುಟುಂಬ ಕಂಕೇರ್‌ನಲ್ಲಿನ ಚರಮಾ ಮರ್ಕಟೋಲಾ ವಿವಾಹ ಕಾರ್ಯಕ್ರಮಕ್ಕೆ ತೆರಳಿತ್ತು. ಮದುವೆಗೆ ತೆರಳುವ ವೇಳೆ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಲಾರಿ ಬೊಲೆರೋಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ಐವರು ಮಹಿಳೆಯರು, ನಾಲ್ವರು ಪುರುಷರು ಹಾಗೂ ಮಗು ಮೃತಪಟ್ಟಿದೆ. ಘಟನೆಯಲ್ಲಿ ಬಾಲಕಿಯೊಬ್ಬಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣವೇನು, ಮೃತರು ಯಾರು ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ.