ಹೊಸ ದಿಗಂತ ವರದಿ, ಮೈಸೂರು :
ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಪೊಲೀಸ್ ಬಡಾವಣೆ ರಿಂಗ್ ರಸ್ತೆ ಬಳಿ ನಡೆದಿದೆ.
ಬೈಕ್ ಸವಾರರಾದ ಶ್ರೀನಿವಾಸ (30) ಹಾಗೂ ನಾಗೇಂದ್ರ (43) ಮೃತಪಟ್ಟವರು. ಇವರು ಬುಲೆಟ್ ಬೈಕ್‌ನಲ್ಲಿ ಬರುತ್ತಿದ್ದಾಗ ಬೊಲೆರೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡ ಶ್ರೀನಿವಾಸ್ ಹಾಗೂ ನಾಗೇಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸಿದ್ದಾರ್ಥ ನಗರ ಸಂಚಾರ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಬೊಲೆರೋ ವಾಹನ ಪತ್ತೆಗೆ ಕ್ರಮವಹಿಸಿದ್ದಾರೆ.