ಮುಂದೆ ಸಾಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ: ಘಟನೆಯಲ್ಲಿ ಇಬ್ಬರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿದ್ದ ಲಾರಿಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.

ಉಮೇಶ್ ನಾಗಪ್ಪ, ಸಂತೋಷ್ ಸುರೇಶ್ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಬೆಳಗಾವಿ ಜಿಲ್ಲೆಯ ಅಥಣಿಯವರು ಎಂದು ಗುರುತಿಸಲಾಗಿದೆ. ಬೊಲೆರೋ ಚಾಲಕನಿಗೆ ಶಿರಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ದ್ರಾಕ್ಷಿ ತುಂಬಿದ ಬೊಲೆರೋ ವಾಹನ ಬೆಂಗಳೂರಿನತ್ತ ಹೊರಟಿತ್ತು. ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!