ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾದ ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಅಯ್ಯಪ್ಪ

ಹೊಸದಿಗಂತ ವರದಿ, ಮಡಿಕೇರಿ:

ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚಯ್ಯ ಅವರ ಕಾರ್ಯದರ್ಶಿಯಾಗಿದ್ದ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಕುಶಾಲನಗರದ ಕಾರು ನಿಲ್ದಾಣದಲ್ಲಿ ಸೋಮವಾರ ಸಂಜೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಸಮ್ಮುಖದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಚನ್ನಪಂಡ ದರ್ಶನ್, ಅಜ್ಜಮಕ್ಕಡ ನವೀನ್, ಸುಮಂತ್ ಪೂಜಾರಿ, ನಿತಿನ್ ಪೂಜಾರಿ, ತಂಬುಕುತ್ತಿರ ಮೊಣ್ಣಯ್ಯ, ಸಿ.ಡಿ.ಪ್ರಸಾದ್, ಕೆ.ಜಿ.ವಿನಯ್, ಕೆ.ಎಸ್.ರಕ್ಷಿತ್, ಕೆ.ಜೆ.ಹರ್ಷಿತ್, ಬಿ.ಇ.ಲೋಹಿತ್, ಕೆ.ಕೆ.ಗಿರೀಶ್, ಸಿ.ಎಂ.ಪ್ರಮೋದ್, ಎಸ್.ಎಸ್.ಅಕ್ಷಿತ್, ಎಂ.ಬಿ.ಆನಂದ್, ಪಿ.ಆರ್.ಚಂದ್ರಕಾಂತ್, ಸಿ.ಆರ್.ಬಿಪಿನ್, ಜಿ.ಕೆ.ಬೀನಾ, ಸಿ.ಎಸ್.ತೀರ್ಥ, ಶಿವಯ್ಯ, ವೀರನ್ ದೇವಯ್ಯ, ಕವನ್ ಕಾರ್ಯಪ್ಪ, ಶರೀಫ್, ಕೆ.ಕೆ.ಕೌಶಿಕ್, ಜಗದೀಶ್, ಹೃತಿಕ್, ವಂಸತ್, ರಾಜ, ಆನಂದ್, ಲೋಕೇಶ್, ರಂಜಿತ್, ಶಶಾಂಕ್, ಮಂಜು, ಅಜ್ಜಮಕ್ಕಡ ವಿನುಕುಶಾಲಪ್ಪ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಬೊಳ್ಳಜಿರ ಬಿ.ಅಯ್ಯಪ್ಪ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಕಳೆದ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದೆ. ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮೋದಿ ಅವರ ಸಿದ್ಧಾಂತವನ್ನು ಮೆಚ್ಚಿ ಮತ್ತು ಬಿಜೆಪಿ ಮೇಲಿನ ಅಭಿಮಾನದಿಂದ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಸ್ಪಷ್ಟಪಡಿಸಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ವಿದ್ಯಾವಂತ, ಬುದ್ಧಿವಂತ, ಸುಸಂಸ್ಕೃತವಂ
ತ ವ್ಯಕ್ತಿಯಾಗಿದ್ದು, ಭ್ರಷ್ಟಾಚಾರ ರಹಿತ ದಕ್ಷ ಆಡಳಿತ ನೀಡುವ ವಿಶ್ವಾಸ ಮೂಡಿಸಿದ್ದಾರೆ. ಇವರ ಗೆಲುವಿಗಾಗಿ ಶ್ರಮಿಸುವುದಾಗಿ ತಿಳಿಸಿದ ಬೊಳ್ಳಜಿರ ಅಯ್ಯಪ್ಪ ಅವರು, ಇನ್ನು ಮುಂದೆ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಗೌಡ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಕೈ ಬಿಟ್ಟು ಕಮಲ ಹಿಡಿದ ಅಯ್ಯಪ್ಪ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚಯ್ಯ ಅವರ ಆತ್ಮೀಯ ಸಲಹೆಗಾರರು ಹಾಗೂ ಕಾರ್ಯದರ್ಶಿಯಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕಾರ್ಯನಿರ್ವಹಿಸಿದ್ದಾರೆ. ಸದಸ್ಯತ್ವ ಅಭಿಯಾನ ಸೇರಿದಂತೆ ಪಕ್ಷದ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ರಾಜಕೀಯಕ್ಕಿಂತ ಹೆಚ್ಚಾಗಿ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಅವರು ತಮ್ಮ ಕೊಡವ ಮಕ್ಕಡ ಕೂಟ ಸಂಘಟನೆಯ ಮೂಲಕ 88 ಪುಸ್ತಕಗಳನ್ನು ಸಾಹಿತ್ಯ ಲೋಕಕ್ಕೆ ಅರ್ಪಿಸಿದ್ದಾರೆ. ಆ ಮೂಲಕ 100 ಕ್ಕೂ ಅಧಿಕ ಬರಹಗಾರರನ್ನು ಪರಿಚಯಿಸಿ ಪ್ರೋತ್ಸಾಹಿಸಿದ್ದಾರೆ. ಹೊಸ ಹೊಸ ಬರಹಗಾರರಿಗೆ ಅವಕಾಶಗಳನ್ನು ನೀಡಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಅಯ್ಯಪ್ಪ ಅವರು ಸ್ನೇಹಾಚಾರ, ಒಡನಾಟವಿಟ್ಟುಕೊಂಡಿದ್ದರೂ ಎಲ್ಲೂ ಸ್ವಾರ್ಥ ರಾಜಕಾರಣ ಮಾಡಿಲ್ಲ.ಕೊಡವ ಸ್ನಾತಕೋತ್ತರ ಪದವಿ ಪಡೆದವರಲ್ಲಿ ಮೊದಲಿಗರಾದ ಅಯ್ಯಪ್ಪ ಅವರು ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷರಾಗಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಸಾಹಿತ್ಯ ಕ್ಷೇತ್ರದ ಬಗ್ಗೆ ಹೆಚ್ಚು ಒಲವು ಹೊಂದಿದ್ದ ಅಯ್ಯಪ್ಪ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನ ಲಭಿಸುವ ನಿರೀಕ್ಷೆಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!