ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಅಮೀರ್‌ ಖಾನ್‌ (Aamir Khan) ಅವರ ಡೀಪ್‌ ಫೇಕ್‌ (Deep Fake) ವಿಡಿಯೋವನ್ನು ಬಳಸಿದ್ದಕ್ಕೆ ಕಾಂಗ್ರೆಸ್‌ (Congress) ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಮೀರ್ ಖಾನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗುರಿಯಾಗಿಸಿಕೊಂಡು ಅಮೀರ್​ ಖಾನ್ ಅವರು ಮಾತನಾಡಿರುವಂತೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಡೀಪ್​ಫೇಕ್ ವಿಡಿಯೋ ಮಾಡಿದ್ದಾರೆ.

ದೂರದರ್ಶನ ಕಾರ್ಯಕ್ರಮ ‘ಸತ್ಯಮೇವ್ ಜಯತೆ’ ಒಂದು ಸಂಚಿಕೆಯನ್ನು ಒಳಗೊಂಡಂತೆ ವಿವಾದಿತ ಜಾಹೀರಾತಿನಲ್ಲಿ ಅಮೀರ್ ಖಾನ್ ದೃಶ್ಯವನ್ನು ಸೇರಿಸಲಾಗಿದೆ. ಬಿಜೆಪಿಯು ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವ ಭರವಸೆಯನ್ನು ಅಮೀರ್ ಖಾನ್​ ಟೀಕಿಸಿರುವಂತೆ ಡೀಪ್​ಫೇಕ್ ವಿಡಿಯೋ ಜನರೇಟ್​ ಮಾಡಲಾಗಿದೆ.ರಾಜಕೀಯ ಪಕ್ಷವನ್ನು ಬೆಂಬಲಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನೆಲ್ಲೇ ಮುಂಬೈ ಪೊಲೀಸರ ಸೈಬರ್ ಕ್ರೈಮ್ ಸೆಲ್‌ನಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!