ಭಾರತದ ಪೌರತ್ವ ಸಿಕ್ಕ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗಷ್ಟೇ ಭಾರತದ ಪೌರತ್ವ ಪಡೆದುಕೊಂಡ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ.

ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ.

ಈವರೆಗೂ ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಇತ್ತೀಚೆಗಷ್ಟೇ ಭಾರತದ ಪೌರತ್ವ ಪಡೆದುಕೊಂಡಿದ್ದರು.

ಇಂದು ಲೋಕಸಭೆಗೆ ಐದನೇ ಹಂತದಲ್ಲಿ (Loksabha Elections 2024) ಮತದಾನ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!