ಗವಿಸಿದ್ದೇಶ್ವರ ಜಾತ್ರೆಗೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಗೆ ಆಹ್ವಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿಯ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ.

ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ 15ರಂದು ನಡೆಯುತ್ತಿದ್ದು, ಮಠದ ಆಡಳಿತ ಮಂಡಳಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ ಪತ್ರ ನೀಡಿ ಬಂದಿದೆ.

ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದ್ದು, ಅವರು ಈ ವರ್ಷದ ಜಾತ್ರೆಗೆ ಮುಖ್ಯ ಅತಿಥಿಯಾಗಿ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!