ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ನಿನ್ನೆಯಷ್ಟೇ ಗುಜರಾತಿನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅನಂತ್‌ನಾಗ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಬಾಲಿವುಡ್ ನಟ ಅನುಪಮ್ ಖೇರ್ ವಿಡಿಯೋವೊಂದನ್ನು ಪೋಸ್ಟ್ ಮಾಡಿ, ಅನಂತ್ ನಾಗ್ ಅವರನ್ನು ಹಾಡಿ ಹೊಗಳಿದ್ದಾರೆ. ಇವರು ಪ್ರಶಸ್ತಿ ಸ್ವೀಕರಿಸುವುದನ್ನು ನೋಡುತ್ತಿದ್ದರೆ ನನಗೆ ಇನ್ನಷ್ಟು ಪ್ರೇರಣೆ ಸಿಕ್ಕಂತಾಗುತ್ತಿದೆ ಎಂದು ಹೇಳಿದ್ದಾರೆ.
ವಿಡಿಯೋದಲ್ಲೇನಿದೆ?
ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಎಲ್ಲರಿಗೂ ನನ್ನ ಅಭಿನಂದನೆಗಳು. ಈ ಬಾರಿ ಮಹಾನ್ ಕಲಾವಿದ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಇದು ನನಗೆ ಅತೀವ ಸಂತಸವನ್ನುಂಟುಮಾಡಿದೆ. ನಾನು ಅವರ ಅಭಿಮಾನಿ, ಅವರ ಹಲವು ಸಿನಿಮಾಗಳನ್ನು ನೋಡಿದ್ದೇನೆ. ಅವರ ನೈಜ ನಟನೆ, ಪ್ರಭಾವಶಾಲಿ ಮಾತುಗಳು ಅದ್ಭುತ. ಅವರು ವೆಲ್ ಡಿಸರ್ವಿಂಗ್. ಅವರಿಂದ ಇನ್ನಷ್ಟು ಪ್ರೇರಣೆ ಪಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಹಿಂದಿ ಸಿನಿಮಾಗಳು ಯಾವುದು?
ಅಂಕುರ್, ನಿಶಾಂತ್, ಮಂಥನ್, ಭೂಮಿಕಾ, ಕೊಂಡುರಾ, ಗೆಹೆರಾಯಿ, ಮಂಗಳಸೂತ್ರ, ಕಲಿಯುಗ್, ಸೂಖಾ, ಶಾಂತಿ ಕ್ರಾಂತಿ, ರಾತ್, ಮಾಯ, ಯುವ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.



