October 10, 2026
Saturday, October 10, 2026
spot_img

ಬಾಲಿವುಡ್ ನಟ ರಣವೀರ್ ಸಿಂಗ್‌ ಗೆ ಬಂತು ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ರಣವೀರ್ ಸಿಂಗ್‌ ಗೆ ಬೆದರಿಕೆ ಸಂದೇಶ ಬಂದಿದೆ.

ವಾಟ್ಸಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಕಳಿಸಿ ಬೆದರಿಕೆ ಹಾಕಲಾಗಿದ್ದು, ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದರ ಬೆನ್ನಲ್ಲೇ ಮುಂಬೈ ಪೊಲೀಸರಿಗೆ ರಣವೀರ್ ಮಾಹಿತಿ ನೀಡಿದ್ದು, ವಾಯ್ಸ್‌ ಮೆಸೇಜ್‌ನಲ್ಲಿರೋ ಧ್ವನಿ ಯಾರದ್ದೂ ಎಂದು ಪತ್ತೆಹಚ್ಚಲು ಮುಂದಾಗಿದ್ದಾರೆ.

ಇತ್ತ ಬೆದರಿಕೆ ಸಂದೇಶ ಕಳಿಸಿದವರು ತಮ್ಮನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನವರು ಎಂದು ಹೇಳಿಕೊಂಡಿದ್ದಾರೆ.

ಬೆದರಿಕೆ ಬಂದ ನಂತರ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ವಾಸಿಸುವ ಹೌಸಿಂಗ್ ಸೊಸೈಟಿಯ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬಾಲಿವುಡ್‌ ನಟ, ನಿರ್ಮಾಪಕರಿಗೆ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿತ್ತು.

Must Read