ಬಾಲಿವುಡ್​ ನಟ ಸೈಫ್​ ಅಲಿ ಖಾನ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್​ ನಟ ಸೈಫ್​ ಅಲಿ ಖಾನ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುದ್ದಿ ತಿಳಿದು ಸೈಫ್​ ಅಭಿಮಾನಿಗಳು ಆತಂಕಗೊಂಡಿದ್ದಾರೆ.
ನಟನ ಭುಜದಲ್ಲೂ ಮೂಳೆ ಮುರಿತವಾಗಿದೆ ಎಂದು ಹೇಳಲಾಗುತ್ತಿದ್ದು, ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಇದೆಲ್ಲ ಹೇಗೆ ನಡೆದಿದೆ ಎಂಬ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ. ಕರೀನಾ ಕಪೂರ್​ ಅವರು ಸದ್ಯ ಆಸ್ಪತ್ರೆಯಲ್ಲಿಯೇ ಇರುವುದಾಗಿ ಮಾಹಿತಿ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!