ರಾಜಕೀಯಕ್ಕೆ ಬಾಲಿವುಡ್ ನಟ ಸಂಜಯ್​ ದತ್​?: ಈ ಕುರಿತು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಕಾವು ಹೆಚ್ಚುತ್ತಿದ್ದು, ಎಲ್ಲ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಕಂಗನಾ ರಣಾವತ್​, ಅರುಣ್​ ಗೋವಿಲ್​ ಮುಂತಾದ ಕಲಾವಿದರು ಈ ಬಾರಿ ಚುನಾವಣೆಯಲ್ಲಿ (Elections) ಸ್ಪರ್ಧಿಸುತ್ತಿದ್ದಾರೆ.

ಇದರ ನಡುವೆ ಬಾಲಿವುಡ್​ನ ಮತ್ತೊರ್ವ ಸ್ಟಾರ್ ನಟ ಸಂಜಯ್​ ದತ್​ (Sanjay Dutt) ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಗಾಳಿಸುದ್ದಿ ಹಬ್ಬಿದೆ. ಅದಕ್ಕೆ ಸ್ವತಃ ಸಂಜಯ್​ ದತ್​ ಅವರು ಸ್ಪಷ್ಟನೆ ನೀಡಿದ್ದಾರೆ.

‘ನಾನು ರಾಜಕೀಯಕ್ಕೆ ಸೇರುತ್ತೇನೆ ಎಂಬ ಎಲ್ಲಾ ವದಂತಿಗಳಿಗೆ ತೆರೆ ಎಳೆಯಲು ನಾನು ಬಯಸುತ್ತೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ ಅಥವಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ನಿರ್ಧರಿಸಿದರೆ ಅದನ್ನು ಘೋಷಿಸುವ ಮೊದಲ ವ್ಯಕ್ತಿ ನಾನೇ. ಸದ್ಯಕ್ಕೆ ನನ್ನ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳನ್ನು ನಂಬುವುದರಿಂದ ದೂರವಿರಿ’ ಎಂದು ಸಂಜಯ್​ ದತ್​ ಅವರು ‘ಎಕ್ಸ್​’ (ಟ್ವಿಟರ್​) ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಮೊದಲು ಕೂಡ ಸಂಜಯ್​ ದತ್​ ಅವರ ಬಗ್ಗೆ ಈ ರೀತಿಯ ಗಾಳಿ ಸುದ್ದಿಗಳು ಹಬ್ಬಿದ್ದವು. 2019ರಲ್ಲಿ ‘ರಾಷ್ಟ್ರೀಯ ಸಮಾಜ ಪಕ್ಷ’ ಸೇರುವಂತೆ ಅವರಿಗೆ ಆಫರ್​ ನೀಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಈಗ ಲೋಕಸಭಾ ಚುನಾವಣೆಯ ಕಾವು ಜೋರಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಜಯ್​ ದತ್​ ಅವರ ಬಗ್ಗೆ ಗಾಸಿಪ್​ ಹರಡಿದೆ. ಆದರೆ ಅವರೇ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಅಂಕೆ-ಕಂತೆಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!