ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಅಹಮದಾಬಾದ್ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಚಿಂತಿತರಾಗಿದ್ದಾರೆ.
ಮಂಗಳವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದ ವೇಳೆ ಶಾರುಖ್ ಹೀಟ್ ಸ್ಟ್ರೋಕ್ ನಿಂದಾಗಿ ಅಸ್ವಸ್ಥರಾಗಿದ್ದರು. SRH ವಿರುದ್ಧದ IPL 2024 ಪ್ಲೇಆಫ್ಗಳ ಮೊದಲ ಪಂದ್ಯದಲ್ಲಿ KKR ಅನ್ನು ಬೆಂಬಲಿಸಲು ಶಾರುಖ್ ಖಾನ್ ಅಹಮದಾಬಾದ್ನಲ್ಲಿದ್ದರು.
ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಡಿಹೈಡ್ರೇಷನ್ ಮತ್ತು ಹೀಟ್ ಸ್ಟ್ರೋಕ್ ಕಾರಣದಿಂದ ಶಾರುಖ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.