ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟ ಸುನೀಲ್ ಶೆಟ್ಟಿ ವಾಸಿಸಿತ್ತಿರುವ ಮುಂಬೈನ ಅಪಾರ್ಟ್ಮೆಂಟ್ ಕಟ್ಟಡವನ್ನು ಸೀಲ್ ಮಾಡಲಾಗಿದೆ.
ಹೌದು.. ಸುನೀಲ್ ವಾಸಿಸುತ್ತಿರುವ, ದಕ್ಷಿಣ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿನ ಪೃಥ್ವಿ ಅಪಾರ್ಟ್ಮೆಂಟ್ಸ್ ಕಟ್ಟಡದಲ್ಲಿ ಕೆಲವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಬೃಹತ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್(ಬಿಎಂಸಿ) ಈ ಕ್ರಮ ಕೈಗೊಂಡಿದೆ.
ಸುನೀಲ್ ಹಾಗೂ ಕುಟುಂಬಸ್ಥರು ಆರೋಗ್ಯವಾಗಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಬಿಎಂಸಿ ಸಹಾಯಕ ಆಯುಕ್ತ ಪ್ರಶಾಂತ್ ಗಾಯಕ್ವಾಡ್ ತಿಳಿಸಿದ್ದಾರೆ.