ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಿತ್ರೀಕರಣದ ವೇಳೆ ಬಾಲಿವುಡ್ ನಟ ವರುಣ್ ಧವನ್‌ಗೆ ಪಕ್ಕೆಲುಬಿಗೆ ಪೆಟ್ಟಾಗಿದೆ.ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರ ಕೇಳಿ ವರುಣ್ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ.
ಡೇವಿಡ್ ಧವನ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಮೃಣಾಲ್ ಠಾಕೂರ್‌ಗೆ ನಾಯಕನಾಗಿ ವರುಣ್ ಧವನ್ ನಟಿಸುತ್ತಿದ್ದರು. ಈ ಸಿನಿಮಾದ ಚಿತ್ರೀಕರಣದ ವೇಳೆ, ವರುಣ್ ಪಕ್ಕೆಲುಬಿಗೆ ಪೆಟ್ಟು ಬಿದ್ದಿದೆ. ಕೂಡಲೇ ನಟನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಸದ್ಯ ಈ ಸಿನಿಮಾದ ಮುಂದಿನ ಶೆಡ್ಯೂಲ್ ನವೆಂಬರ್‌ಗೆ ಮುಂದೂಡಲಾಗಿದೆ.