ಬಾಲಿವುಡ್ ನಟಿ ಐಶ್ವರ್ಯಾ ರೈ ಭೂಕಂದಾಯ ಇಲಾಖೆಯಿಂದ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಿವುಡ್ ನಟಿ ಐಶ್ವರ್ಯಾ ರೈ (Aishwarya Rai) ಗೆ ನಾಸಿಕ್ ಭೂಕಂದಾಯ ಇಲಾಖೆ ನೋಟಿಸ್ ನೀಡಿದೆ.

ನಾಸಿಕ್‌ನಲ್ಲಿ ಆಸ್ತಿ ಹೊಂದಿರುವ ನಟಿ ಐಶ್ವರ್ಯಾ ರೈ ಭೂ ತೆರಿಗೆ ಪಾವತಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ನಟಿ ಐಶ್ವರ್ಯಾ ರೈಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವರ್ಷದಿಂದ ಆ ಭೂಮಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿಸಿಲ್ಲ. ಹೀಗಾಗಿ, ಜಿಲ್ಲಾಡಳಿತದ ಸಂಬಂಧಪಟ್ಟ ಅಧಿಕಾರಿಗಳು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಗೆ ನೋಟಿಸ್ ಕಳುಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!