ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅನಾರೋಗ್ಯದಿಂದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ರಾತ್ರಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಆಕೆಗೆ ಹಲವಾರು ಪರೀಕ್ಷೆಗಳನ್ನು ಮಾಡಲಾಗಿದೆ. ಚಿಕಿತ್ಸೆ ಬಳಿಕ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ.

ಜೂನ್‌ನಲ್ಲಿ ‘ಪ್ರಾಜೆಕ್ಟ್ ಕೆ’ ಎಂಬ ತಾತ್ಕಾಲಿಕ ಶೀರ್ಷಿಕೆಯ ಚಲನಚಿತ್ರದ ಸೆಟ್‌ ನಲ್ಲಿ ಅಸ್ವಸ್ಥತೆಯ ಕಾರಣ ದೀಪಿಕಾ ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೆಟ್‌ ನಲ್ಲಿ ಹೃದಯ ಬಡಿತ ಹೆಚ್ಚಾಗಿ ಅವರನ್ನು ಕಾಮಿನೇನಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಶೀಘ್ರದಲ್ಲೇ ದೀಪಿಕಾ ಚೇತರಿಸಿಕೊಂಡು ಸೆಟ್‌ ಗೆ ಮರಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!