ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಇಂದು (ಏ.6)ನಿಧನರಾಗಿದ್ದಾರೆ. ನಟಿಯ ತಾಯಿಯ ನಿಧನಕ್ಕೆ ಬಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.

ಹಲವು ದಿನಗಳಿಂದ ಜಾಕ್ವೆಲಿನ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾ.24ರಂದೇ ಕಿಮ್ ಫರ್ನಾಂಡಿಸ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಐಸಿಯುಗೆ ದಾಖಲಿಸಲಾಗಿತ್ತು. ಆ ವೇಳೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಸೇರಿದಂತೆ ನಟಿಯ ಆಪ್ತರು ಆಸ್ಪತ್ರೆಗೆ ಆಗಮಿಸಿ ಕಿಮ್ ಅವರ ಆರೋಗ್ಯವನ್ನು ವಿಚಾರಿಸಿದ್ದರು.

ಆದರೆ ಇಂದು ಪಾರ್ಶ್ವವಾಯುವಿಗೆ ತುತ್ತಾಗಿ ಜಾಕ್ವೆಲಿನ್ ತಾಯಿ ಕಿಮ್ ವಿಧಿವಶರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!