ತಿರುಪತಿ ವೆಂಕಟೇಶ್ವರ ಸನ್ನಿಧಿಯಲ್ಲಿ ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌ ನಿನ್ನೆ (ಮಾರ್ಚ್‌ 6) ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಹುಟ್ಟುಹಬ್ಬದ ನಿಮಿತ್ತದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ ಈ ಸಂದರ್ಭನಟಿ ಜಾಹ್ನವಿ ಕಪೂರ್ ದಕ್ಷಿಣ ಭಾರತ ಶೈಲಿಯ ಜರಿ ಸೀರೆ ಉಟ್ಟಿದ್ದರು.

ಮಾರ್ಚ್ 6 ರಂದು ತಮ್ಮ 27 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ನಟಿ ಜಾಹ್ನವಿ ಕಪೂರ್ , ತಾವು ಈ ಸಮಯದಲ್ಲಿ ತೆಗೆಸಿಕೊಂಡಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಗುಲಾಬಿ ಬಣ್ಣದ ಸೀರೆ ಉಟ್ಟಿರುವ ನಟಿ, ತುಂಬಾ ಮುದ್ದು ಮುದ್ದಾಗಿ ಕಾಣುತ್ತಿದ್ದು, ನೋಡುಗರನ್ನು ಮಂತ್ರಮುಗ್ಧಗೊಳಿಸುತ್ತಿದ್ದರು. ‘ಬರ್ತ್ ಡೇ ಗರ್ಲ್’ ಜಾಹ್ನವಿ ಕಪೋರ್ ಗ್ಲಾಮರಸ್ ಲುಕ್‌ ನೋಡಿ ಅಲ್ಲಿದ್ದವರು ಬೆರಗಾಗಿದ್ದರು.

ತಮ್ಮ ಹುಟ್ಟುಹಬ್ಬದ ಸುಸಂದರ್ಭದಲ್ಲಿ ನಟಿ ಜಾಹ್ನವಿ ಕಪೂರ್ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!