ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಫುಡ್ ಪಾಯಿಸನ್ ಸೇವನೆಯಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿಯ ಆರೋಗ್ಯದ ಬಗ್ಗೆ ತಂದೆ ಬೋನಿ ಕಪೂರ್ ಮಾತನಾಡಿದ್ದಾರೆ.
ಫುಡ್ ಪಾಯ್ಸನಿಂಗ್ ನಿಂದಾಗಿ ಜು18 ರಂದು ಜಾಹ್ನವಿ ಕಪೂರ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿರಂತರ ಕೆಲಸ ಮತ್ತು ಓಡಾಟದಿಂದಾಗಿ ಆರೋಗ್ಯ ಹದಗೆಟ್ಟಿದೆ. ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಅವರ ಆರೋಗ್ಯ ಈಗ ಸುಧಾರಿಸಿದ್ದು, ಜು 20 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೋನಿ ಕಪೂರ್, ತಮ್ಮ ಮಗಳು ಈಗ ಆರೋಗ್ಯವಾಗಿದ್ದರೆ ಎಂದು ಹೇಳಿದ್ದಾರೆ. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ ಮತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದರು.