ಅಯೋಧ್ಯೆಗೆ ಬಂದ ಬಾಲಿವುಡ್ ನಟಿ ಕಂಗನಾ ರಣಾವತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ.22ರಂದು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲು ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ಅಯೋಧ್ಯೆಗೆ ತಲುಪಿದ್ದಾರೆ.

ಅಯೋಧ್ಯೆ ಏರ್‌ಪೋರ್ಟ್ ಕಂಗನಾ ಬರುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರಾಮಮಂದಿರ ಕೇವಲ ಪ್ರತಿಮೆಯಲ್ಲ ಎಂದಿದ್ದಾರೆ. ಈ ಘಳಿಗೆ ಭಾರತದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತದೆ ಎಂದು ಮಾತನಾಡಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಲು ಸಾಧ್ಯವಾಗುವುದು ತಮ್ಮ ಹಿಂದಿನ ಜೀವನದ ಕರ್ಮದ ಫಲವಾಗಿ. ಈ ಮಹತ್ವದ ದಿನವನ್ನು ತರಲು ದೇಶವು ಒಗ್ಗೂಡಿದ್ದು, ಇಡೀ ರಾಷ್ಟ್ರಕ್ಕಿದು ಅದೃಷ್ಟದ ಕ್ಷಣವೆಂದು ಕಂಗನಾ ಮಾತನಾಡಿದ್ದಾರೆ. ಅಯೋಧ್ಯೆಯ ದರ್ಶನ ಪಡೆಯಲು ಹಲವು ಜನ್ಮಗಳ ಪುಣ್ಯ ಮಾಡಿರಬೇಕು ಎಂದು ಕಂಗನಾ ಹೇಳಿದ್ದಾರೆ. ಈ ಕಾರ್ಯಕ್ರಮ ಮುಗಿಯೋವರೆಗೂ ಅಯೋಧ್ಯೆಯಲ್ಲಿರೋದಾಗಿ ಕಂಗನಾ ತಿಳಿಸಿದ್ದಾರೆ.

ಇನ್ನೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಗುರು ರಾಮಭದ್ರಾಚಾರ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕ್ಷಣಗಳ ಫೋಟೋಗಳನ್ನು ಕಂಗನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!