ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಕಂಗನಾ ರಣಾವತ್ ಮಂಡಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ಪ್ರಚಂಡ ಗೆಲುವು ಸಾಧಿಸಿದ್ದಾರೆ.
ಮಂಡಿ ಕ್ಷೇತ್ರದಲ್ಲಿ ಹೈ ಪ್ರೊಫೈಲ್ ಸ್ಪರ್ಧೆ ಇರಲಿದೆ. ನಟಿಯಾಗಿ ಈಗಾಗಲೇ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿರುವ ಕಂಗನಾ ರಣಾವತ್ ಅವರು ಈ ಬಾರಿ ರಾಜಕಾರಣಿಯಾಗಿ ಮೊದಲ ಚುನಾವಣೆಯನ್ನು ಎದುರಿಸಿದ್ದಾರೆ.
ಕಂಗನಾ ರಣಾವತ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು 6 ಬಾರಿ ಸಿಎಂ ಆಗಿದ್ದ ವೀರಭದ್ರ ಸಿಂಗ್ ಹಾಗೂ ಹಾಲಿ ಮಂಡಿ ಸಂಸದೆ ಪ್ರತಿಭಾ ಸಿಂಗ್ ಅವರ ಪುತ್ರ.