ಬಾಲಿವುಡ್‌ ನಟಿ ನೂರ್‌ ಮಾಳವಿಕಾ ದಾಸ್‌ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ ನಟಿ ನಟಿ ನೂರ್‌ ಮಾಳವಿಕಾ ದಾಸ್‌ ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!