ಬಾಲಿವುಡ್ ನಟಿ ರಾಖಿ ಸಾವಂತ್​ ಗೆ ಬಂಧನದ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ರಾಖಿ ಸಾವಂತ್​ ಅವರು ಈಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಏಕೆಂದರೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಪತಿ ಆದಿಲ್​ ಖಾನ್​ ದುರ್ರಾನಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಂದಿದೆ. ಆದಿಲ್ ಅವರ ಖಾಸಗಿ ವಿಡಿಯೋವನ್ನು ರಾಖಿ ವೈರಲ್ ಮಾಡಿದ್ದರು. ಈ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ರಾಖಿ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಹೀಗಾಗಿ ಯಾವ ಕ್ಷಣದಲ್ಲಾದರೂ ರಾಖಿ ಬಂಧನಕ್ಕೆ ಒಳಗಾಗುತ್ತಾರಾ ಎಂಬ ಚರ್ಚೆಗಳು ಎದ್ದಿವೆ.

ಮುಂಬೈಯ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಸ್ವತಃ ಮಾಜಿ ಪತ್ನಿಯ ವಿರುದ್ಧವೇ ಆದಿಲ ದೂರು ನೀಡಿದ್ದರು. ತಮ್ಮ ಖಾಸಗಿ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಮಾನಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ದೂರು ದಾಖಲಾಗುತ್ತಿದ್ದಂತೆಯೇ ರಾಖಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಹೆಚ್ಚುವರೆ ಸೆಷನ್ಸ್ ನ್ಯಾಯಾಧೀಶ ಶ್ರೀಕಾಂತ್ ವೈ ಭೋಂಸ್ಲೆ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ರಾಖಿ ಬಿಡುಗಡೆ ಮಾಡಿರುವ ವಿಡಿಯೋ ಅಶ್ಲೀಲವಾಗಿವೆ ಎಂದು ಕೋರ್ಟ್ ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟಿದೆ. ಹಾಗಾಗಿ ರಾಖಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!