ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಶ್ಲೀಲ ಚಿತ್ರಣಗಳ ವಿತರಣೆ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿಗೊಳಿಸಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಇಡಿ ಮುಂಬೈ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಅಶ್ಲೀಲ ವಿಷಯದ ಉತ್ಪಾದನೆ ಮತ್ತು ವಿತರಣೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಕುಂದ್ರಾಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದ ಎರಡು ದಿನಗಳ ನಂತರ ಸಮನ್ಸ್ ಜಾರಿ ಮಾಡಲಾಗಿದೆ.
ಜುಲೈ 2021 ರಲ್ಲಿ ಮುಂಬೈ ಪೊಲೀಸರು ಅಶ್ಲೀಲ ವಿಷಯವನ್ನು ತಯಾರಿಸಿದ್ದಾರೆ ಮತ್ತು ವಿತರಿಸಿದ್ದಾರೆಂದು ಆರೋಪಿಸಿ ಕುಂದ್ರಾ ಅವರನ್ನು ಬಂಧಿಸಿದ್ದರು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.