ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ‘ಕೆಡಿ’ ಸಿನಿಮಾದ ಶೂಟಿಂಗ್ ಅನ್ನು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪೂರ್ಣಗೊಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದಸಿನಿಮಾದ ಚಿತ್ರೀಕರಣಗಾಗಿ ಮೈಸೂರಿನಲ್ಲಿ ಉಳಿದುಕೊಂಡಿದ್ದ ಅವರು ಇದೀಗ ತಮ್ಮ ಭಾಗದ ಬಹುತೇಕ ಚಿತ್ರೀಕರಣವನ್ನು ಮುಗಿಸಿಕೊಟ್ಟಿದ್ದಾರೆ .
ಈ ಖುಷಿಯಲ್ಲಿ ಹೊಸ ವಿಡಿಯೋ ಹಂಚಿಕೊಂಡಿದ್ದು, ಕೊನೇ ದಿನ ಶೂಟಿಂಗ್ ಸೆಟ್ನಿಂದಲೇ ನಿರ್ದೇಶಕ ‘ಜೋಗಿ’ ಪ್ರೇಮ್ (Prem) ಸೇರಿದಂತೆ ಇಡೀ ಚಿತ್ರತಂಡದವರ ಜೊತೆ ಶಿಲ್ಪಾ ಶೆಟ್ಟಿ ಖುಷಿ ಖುಷಿಯಿಂದ ಪೋಸ್ ನೀಡಿದ್ದಾರೆ.
ಬಾಲಿವುಡ್ ಕಲಾವಿದರಾದ ಸಂಜಯ್ ದತ್ ಹಾಗೂ ಶಿಲ್ಪಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಶಿಲ್ಪಾ ಶೆಟ್ಟಿ ಅವರ ಪಾತ್ರದ ಹೆಸರು ಸತ್ಯವತಿ. ಇದು ತಮ್ಮ ಫೇವರಿಟ್ ಪಾತ್ರಗಳಲ್ಲಿ ಒಂದು ಎಂದು ಅವರು ಹೇಳಿದ್ದಾರೆ.
‘ಕೆಡಿ’ ಸಿನಿಮಾದಲ್ಲಿ ರೆಟ್ರೋ ಕಾಲದ ಕಥೆ ಇರಲಿದೆ. ಅದಕ್ಕೆ ತಕ್ಕಂತೆಯೇ ಕಲಾವಿದರ ವೇಷಭೂಷಣ ಇದೆ. ಶಿಲ್ಪಾ ಶೆಟ್ಟಿ ಅವರು ಫಸ್ಟ್ ಲುಕ್ ಪೋಸ್ಟರ್ ಅನ್ನು ಕೆಲವು ತಿಂಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಸೀರೆ ಗೆಟಪ್ನಲ್ಲಿ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೊನೇ ದಿನ ಶೂಟಿಂಗ್ನಲ್ಲೂ ಅವರು ಇದೇ ಗೆಟಪ್ ಧರಿಸಿದ್ದಾರೆ. ಶೂಟಿಂಗ್ ಮುಗಿದ ಖುಷಿಯಲ್ಲಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.
ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ (KD Film) ಸಿನಿಮಾ ಇದೇ ಡಿಸೆಂಬರ್‌ಗೆ ತೆರೆಗೆ ಅಪ್ಪಳಿಸಲಿದೆ. ಇದರ ನಡುವೆ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಚಿತ್ರತಂಡ ಹಂಚಿಕೊಂಡಿದೆ. ಸಿನಿಮಾ ರಿಲೀಸ್ ಮುನ್ನವೇ ದುಬಾರಿ ಮೊತ್ತಕ್ಕೆ ‘ಕೆಡಿ’ ಚಿತ್ರದ ಆಡಿಯೋ ರೈಟ್ಸ್ ರಿಲೀಸ್ ಆಗಿದೆ.
‘ಕೆಡಿ’ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅದ್ಧೂರಿಯಾಗಿ ಈ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದೆ.