Wednesday, August 10, 2022

Latest Posts

ಕೋರ್ಟ್​ ಕದ ತಟ್ಟಿದ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ: ಕಾರಣವೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಚಾರಿಟಿ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಹಾಲಿವುಡ್​ ನಟ ರಿಚರ್ಡ್ ಗೇರ್​ ಅವರೊಂದಿಗಿನ ಮುತ್ತಿನ ಪ್ರಕರಣದಿಂದ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿ ಕಳೆದ ಜನವರಿಯಲ್ಲಿ ಮುಂಬೈನ ಬಲ್ಲಾರ್ಡ್ ಪಿಯರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹೊರಡಿಸಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಬಾಲಿವುಡ್​ ನಟಿ ಮನವಿ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ಅವರನ್ನು ಆರೋಪದಿಂದ ಮುಕ್ತಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ರಾಜಸ್ಥಾನದ ಅಲ್ವಾರ್ ಪೊಲೀಸರು ಏಪ್ರಿಲ್‌ನಲ್ಲಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಚುಂಬಿಸುವ ಅಥವಾ ಚುಂಬಿಸಲು ಅನುಮತಿಸುವ ಶಿಲ್ಪಾ ಶೆಟ್ಟಿ ಅವರ ಕೃತ್ಯವು ಅಶ್ಲೀಲವಾಗಿದೆ ಎಂದು ಪೊಲೀಸರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಈ ಅರ್ಜಿಯನ್ನು ವಜಾ ಮಾಡುವಂತೆ ಕೋರಿರುವ ಶಿಲ್ಪಾ ಶೆಟ್ಟಿ, ನಾನು ಕಲಾವಿದೆಯಾಗಿ ಯಾವಾಗಲೂ ಸಾರ್ವಜನಿಕವಾಗಿ ಜವಾಬ್ದಾರಿಯುತವಾಗಿ ವರ್ತಿಸಿದ್ದೇನೆ. ಆದರೆ, ಅಗ್ಗದ ಪ್ರಚಾರಕ್ಕಾಗಿ ನನ್ನ ವಿರುದ್ಧ ಈಗ ಮತ್ತೆ ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಹೇಳಿದ್ದಾರೆ.

2007ರಲ್ಲಿ ನಡೆದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ನಟ ರಿಚರ್ಡ್ ಗೇರ್​ ಹಾಗೂ ಶಿಲ್ಪಾ ಶೆಟ್ಟಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ವೇದಿಕೆ ಮೇಲೆಯೇ ಶಿಲ್ಪಾ ಶೆಟ್ಟಿ ಅವರಿಗೆ ರಿಚರ್ಡ್​ ಮುತ್ತು ಕೊಟ್ಟಿದ್ದರು. ಆದರೆ, ತಮ್ಮನ್ನು ಚುಂಬಿಸಿದಾಗ ಶಿಲ್ಪಾ ಶೆಟ್ಟಿ ಪ್ರತಿಭಟಿಸಲಿಲ್ಲ. ಹೀಗಾಗಿ ಇಬ್ಬರೂ ಅಶ್ಲೀಲತೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಅಲ್ವಾರ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss