Tuesday, March 28, 2023

Latest Posts

ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಸ್ವರಾ ಭಾಸ್ಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್ (Swara Bhaskar) ಬಹುಕಾಲದ ಗೆಳೆಯ ಫಹಾದ್ ಅಹ್ಮದ್ (Fahad Ahamad) ಜೊತೆ ವೈವಾಹಿಕ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ.

ನಟಿ ಸ್ವರಾ ಸದ್ದಿಲ್ಲದೇ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ಪೊಲಿಟಿಕಲ್ ಲೀಡರ್ ಫಹಾದ್ ಜೊತೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಜ.6ರಂದು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಈ ಸಿಹಿಸುದ್ದಿಯನ್ನು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತಿ ಫಹಾದ್ ಜೊತೆಗಿನ ಫೋಟೋ ಶೇರ್ ಮಾಡಿ, ನನ್ನ ಹೃದಯಕ್ಕೆ ಸ್ವಾಗತ, ಇದು ಅಸ್ತವ್ಯಸ್ತವಾಗಿದೆ, ಆದರೆ ಅದು ನಿಮ್ಮದು ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕಳೆದ 2019ರಿಂದ ಫಹಾದ್ (Fahad) ಮತ್ತು ಸ್ವರಾ (Actress Swara) ಡೇಟಿಂಗ್ ಮಾಡ್ತಿದ್ದರು. ಪೊಲಿಟಿಕಲ್‌ ರ‍್ಯಾಲಿವೊಂದರಲ್ಲಿ ಮೊದಲ ಬಾರಿಗೆ ಫಹಾದ್-‌ ಸ್ವರಾ ಭೇಟಿಯಾಗಿದ್ದರು. ಈ ಬಗ್ಗೆ ಎಲ್ಲೂ ಕೂಡ ರಿವೀಲ್ ಮಾಡದೇ, ಇದೀಗ ಹಲವು ವರ್ಷಗಳ ಪ್ರೀತಿಗೆ ಮದುವೆಯಾಗುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

ಇನ್ನೂ ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಘಟಕದಲ್ಲಿ ಅಧ್ಯಕ್ಷರಾಗಿ ಫಹಾದ್ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!