ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಆಗಮಿಸಿ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದೀಗ ಬಾಲಿವುಡ್‌ನ ಮಿಲ್ಕಿ ಬ್ಯೂಟಿ ತಮನ್ನಾ ಕೂಡ ಮಹಾ ಕುಂಭಮೇಳಕ್ಕೆ ಆಗಮಿಸಿ ಪುಣ್ಯ ಸ್ನಾನ ಮಾಡಿದರು.
ಈ ವೇಳೆ ಕನ್ನಡದ ನಟ ವಶಿಷ್ಠ ಸಿಂಹ ಸಾಥ್ ನೀಡಿದರು.
ತಮನ್ನಾ ಹಾಗೂ ವಶಿಷ್ಠ ಸಿಂಹ ಒಟ್ಟಾಗಿ ಒಡೇಲಾ-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಚಿತ್ರದ ಟೀಸರ್‌ಅನ್ನು ಪ್ರಯಾಗ್‌ರಾಜ್‌ನಲ್ಲಿಯೇ ಅನಾವರಣ ಮಾಡಿದ್ದಾರೆ. ಇವರೊಂದಿಗೆ ಕನ್ನಡದ ಹೆಸರಾಂತ ಮ್ಯೂಸಿಕ್ ಡೈರೆಕ್ಟರ್ ಅಜನೀಶ್ ಲೋಕನಾಥ್ ಕೂಡ ತಮ್ಮ ಕುಟುಂಬದೊಂದಿಗೆ ಪ್ರಯಾಜ್‌ರಾಜ್‌ಗೆ ಭೇಟಿ ನೀಡಿದ್ದರು. ಎಲ್ಲರೂ ಜೊತೆಯಲ್ಲಿರುವ ಫೋಟೋವನ್ನು ಕೂಡ ಅವರು ಹಂಚಿಕೊಂಡಿದ್ದಾರೆ.
ತಮ್ಮ ಡಾನ್ಸ್ ಹಾಗೂ ನಟನೆಯ ಕಾರಣಕ್ಕೆ ಪ್ರಸಿದ್ಧರಾಗಿರುವ ತಮನ್ನಾ ಭಾಟಿಯಾ ಈಗ ಮತ್ತೊಮ್ಮೆ ಬೆಳ್ಳಿ ಪರದೆಯಲ್ಲಿ ಶಿವಭಕ್ತೆಯಾಗಿ ಕಾಣಿಸಿಕೊಳ್ಳುವ ಸಿದ್ದತೆಯಲ್ಲಿದ್ದಾರೆ. ಒಡೇಲಾ-2 ಸಿನಿಮಾದ ಬಗ್ಗೆ ಅವರಿಗೆ ಸಾಕಷ್ಟು ನಿರೀಕ್ಷೆ ಇದ್ದು, ಇದರಲ್ಲಿ ಶಿವನ ಭಕ್ತೆಯ ಪಾತ್ರದಲ್ಲಿ ನಟಿಸಿದ್ದಾರೆ.