ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕು ತಡೆಯಲು ಈಗಾಗಲೇ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ವೇಳೆ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಹೀಗಿದ್ದು, ಬಾಲಿವುಡ್ ಲವ್ ಬರ್ಡ್ಸ್ ನಟ ಟೈಗರ್ ಶ್ರಾಫ್ ಹಾಗೂ ನಟಿ ದಿಶಾ ಪಟಾನಿ ಜಾಲಿ ರೈಡ್ ಹೋಗಿದ್ದಾರೆ.
ಜಿಮ್ ನಿಂದ ವರ್ಕ್ಔಟ್ ಮುಗಿಸಿ, ಮನೆಗೆ ವಾಪಸ್ ಆಗುವ ವೇಳೆ ಮುಂಬೈನ ಬಾಂದ್ರಾ ರಸ್ತೆಯಲ್ಲಿ ಜಾಲಿ ರೈಡ್ ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಆದಾರ್ ಕಾರ್ಡ್ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ವಶಪಡಿಸಿಕೊಂಡು ಪೊಲೀಸರು ಇಬ್ಬರಿಗೂ ಬುದ್ಧಿ ಹೇಳಿ ಕಳುಹಿಸಿದ್ದಾರೆ.
ಟೈಗರ್ ಶ್ರಾಫ್ ವಿರುದ್ಧ ನಿಯಮ ಉಲ್ಲಂಘಿಸಿದ್ದಕ್ಕಾಗಿ ದೂರು ದಾಖಲಿಸಿದ್ದಾರೆ. ಬೇಲೆಬಲ್ ಕೇಸ್ ಆದ್ದರಿಂದ ಶ್ರಾಫ್ನನ್ನು ಬಂಧಿಸಿಲ್ಲ ಎನ್ನಲಾಗಿದೆ.