ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಬ್ಯೂಟಿ ತಾರಾ ಸುತಾರಿಯಾ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಎಂಬ ಅದ್ಭುತ ಲೋಕಕ್ಕೆ ಕಾಲಿಟ್ಟಿದ್ದಾರೆ. ಈ ಬಹುನಿರೀಕ್ಷಿತ ಚಿತ್ರದಿಂದ ಹಿಂದಿ ನಟಿ-ಗಾಯಕಿಯ ಮೊದಲ ಪೋಸ್ಟರ್ ಅನಾವರಣಗೊಂಡಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಸಿನಿಪ್ರಿಯರಲ್ಲಿ ಸಂಚಲನ ಮೂಡಿಸಿದೆ.
ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ‘ಟಾಕ್ಸಿಕ್’, ಈ ಸಾಲಿನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದು, ನಟಿಮಣಿಯರ ಪೋಸ್ಟರ್ಸ್ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿಯೆಬ್ಬಿಸುತ್ತಿದೆ.

ತಮ್ಮ ಅಫೀಶಿಯಲ್ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ಗಳಲ್ಲಿ ತಾರಾ ಸುತಾರಿಯಾ ಪೋಸ್ಟರ್ ಹಂಚಿಕೊಂಡ ಯಶ್, ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದಿಂದ ತಾರಾ ಸುತಾರಿಯಾ ಅವರನ್ನು ರೆಬೆಕಾ ಪಾತ್ರದಲ್ಲಿ ಪರಿಚಯಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಪಿಸ್ತೂಲ್ ಹಿಡಿದು ಸಖತ್ ಸ್ಟನ್ನಿಂಗ್ ಲುಕ್ನಲ್ಲಿ ತಾರಾ ಸುತಾರಿಯಾ ಕಾಣಿಸಿಕೊಂಡಿದ್ದಾರೆ.

