Tuesday, November 11, 2025

ಬಾಲಿವುಡ್ ದಂತಕತೆ, ನಟ ಧರ್ಮೇಂದ್ರ ಇನ್ನಿಲ್ಲ: ಸುದ್ದಿ‌‌ ಕೇವಲ‌ ವದಂತಿ ಎಂದ ಮನೆಮಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ನಟ ಧರ್ಮೇಂದ್ರ ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಇಹಲೋಕ ತ್ಯಜಿಸಿದ್ದಾರೆ. 89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಧರ್ಮೇಂದ್ರ ಕೊನೆಯುಸಿರೆಳೆದಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಇದೊಂದು ವದಂತಿ‌ ಮಾತ್ರ ಎಂದು ಅವರ ಪುತ್ರಿ
ಈಶಾ ಡಿಯೋಲ್ ಸಾಮಾಜಿಕ‌ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಕೆಲ ದಿನಗಳ ಹಿಂದಷ್ಟೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.







error: Content is protected !!