ಬಾಲಿವುಡ್ ಗಾಯಕ ಹನಿ ಸಿಂಗ್ ಗೆ ಜೀವ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ಗಾಯಕ, ರ್ಯಾಪರ್ ಹನಿ ಸಿಂಗ್ ಗೆ ಜೀವ ಬೆದರಿಕೆ ಕರೆ ಬಂದಿದ್ದು, ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಗಾಯಕ, ‘ನನ್ನ ಮ್ಯಾನೇಜರ್’ಗೆ ಬೆದರಿಕೆ ಕರೆ ಬಂದಿದ್ದು, ಈ ವೇಳೆ ನಾನು ಅಮೆರಿಕದಲ್ಲಿದ್ದೆ, ಅದರಲ್ಲಿ ನನಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಈ ಕುರಿತು ನಾನು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ ಮತ್ತು ಅವರು ಅದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದರು. ನಾನು ಅವರಿಗೆ ಎಲ್ಲಾ ಮಾಹಿತಿ ಮತ್ತು ಪುರಾವೆಗಳನ್ನ ನೀಡಿದ್ದೇನೆ’ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!