ಕಣ ಕಣದಲ್ಲಿ ಕೇಸರಿ ಎಂದ ಬಾಲಿವುಡ್ ಸ್ಟಾರ್ ನಟರಿಗೆ ಕೋರ್ಟ್ ನಿಂದ ಬಂತು ನೊಟೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ಸ್ಟಾರ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಇದೀಗ ಸಂಕಷ್ಟ ಎದುರಾಗಿದೆ.

ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಮೂವರು ನಟರಿಗೆ ನೋಟಿಸ್ ನೀಡಿದೆ.

ನಟರ ಜೊತೆಗೆ ಗುಟ್ಕಾ ತಯಾರಿಕಾ ಕಂಪನಿ ಜೆಬಿ ಇಂಡಸ್ಟ್ರೀಸ್‌ಗೆ ಕೂಡ ಸಮನ್ಸ್ ನೀಡಲಾಗಿದೆ. ಮಾರ್ಚ್ 19ರಂದು ಹಾಜರಾಗುವಂತೆ ಸೂಚನೆ ನೀಡಿದೆ.

ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುವ ಜಾಹೀರಾತು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಿ ಜೈಪುರ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ಇದೀಗ ನಟರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!