ಬಾಲಿವುಡ್‌ನಿಂದ ಹಣ ಬೇಕು, ಹಿಂದಿ ಭಾಷೆ ಬೇಡ ಇದು ಯಾವ ರೀತಿಯ ನ್ಯಾಯ? ಪವನ್ ಕಲ್ಯಾಣ್ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ತಮಿಳುನಾಡು ಬೂಟಾಟಿಕೆ ಪ್ರದರ್ಶಿಸುತ್ತಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಜನರು ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾರೆ. ಇದು ನನಗೆ ಆಶ್ಚರ್ಯ ತಂದಿದೆ, ಜನರಿಗೆ ಹಿಂದಿ ಬೇಡವಾದರೆ, ಆರ್ಥಿಕ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಡಬ್ ಮಾಡುವುದು ಯಾಕೆ? ಜನ ಬಾಲಿವುಡ್‌ನಿಂದ ಹಣವನ್ನು ಬಯಸುತ್ತಾರೆ ಆದರೆ ಹಿಂದಿಯನ್ನು ಸ್ವೀಕರಿಸಲು ನಿರಾಕರಿಸುತ್ತಾರೆ. ಇದು ಯಾವ ರೀತಿಯ ತರ್ಕ? ಎಂದು ಪ್ರಶ್ನೆ ಮಾಡಿದ್ದಾರೆ.

ಹಿಂದಿ ಮಾತನಾಡುವ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢಗಳಿಂದ ಆದಾಯ ಬಯಸುತ್ತಾರೆ, ಆದರೆ ಹಿಂದಿ ಬೇಡ ಎಂದು ಹೇಳುತ್ತಾರೆ. ಬಿಹಾರದ ಕಾರ್ಮಿಕರನ್ನು ಸ್ವಾಗತಿಸುತ್ತಾರೆ ಆದರೆ ಭಾಷೆಯನ್ನು ತಿರಸ್ಕರಿಸುತ್ತಾರೆ. ಈ ವಿರೋಧಾಭಾಸ ಏಕೆ? ಈ ಮನಸ್ಥಿತಿ ಬದಲಾಗಬೇಕಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!