ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಯಲ್ಲಿ ಮೃತಪಟ್ಟವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) 128 ಬೆಟಾಲಿಯನ್‍ಗೆ ಸೇರಿದವರಾಗಿದ್ದಾರೆ. ಅವರನ್ನು ಸಿಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್‌ಟೇಬಲ್ ಅರುಪ್ ಸೈನಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಇನ್ಸ್‌ಪೆಕ್ಟರ್ ಜಾದವ್ ದಾಸ್ ಮತ್ತು ಕಾನ್ಸ್‌ಟೇಬಲ್ ಅಫ್ತಾಬ್ ದಾಸ್ ಎಂದು ಗುರುತಿಸಲಾಗಿದೆ.