September 28, 2026
Monday, September 28, 2026
spot_img

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ: 5 ಜಿಲ್ಲೆಗಳಲ್ಲಿ ಇಂಟರ್ನೆಟ್​ ಸ್ಥಗಿತ, ಕರ್ಫ್ಯೂ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಮನೆಯೊಂದರ ಮೇಲೆ ನಡೆದ ಬಾಂಬ್ ದಾಗೆ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಈ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.

ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಹಿನ್ನೆಲೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಜೊತೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.

ಜನರು ಯಾವುದೇ ರೀತಿಯ ತಪ್ಪು ಮಾಹಿತಿ ಮತ್ತು ಸುಳ್ಳು ವದಂತಿಗಳ ಹರಡದಂತೆ ಸೂಚಿಸಲಾಗಿದ್ದು, ಜೊತೆಗೆ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

Must Read