ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪೇಶಾವರದ ಕ್ವಿಸ್ಸಾ ಖಾನ್ವಿ ಬಜಾರ್ ಪ್ರದೇಶದ ಬಳಿ ಇರುವ ಮಸೀದಿ ಒಂದರಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟವಾಗಿದ್ದು, 30 ಮಂದಿ ಮೃತಪಟ್ಟಿದ್ದಾರೆ.
ಬ್ಲಾಸ್ಟ್ ವೇಳೆ ಕನಿಷ್ಠ 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರು ದಾಳಿಕೋರರು ಮಸೀದಿ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಗಾರ್ಡ್ ಅವರನ್ನು ತಡೆಯಲು ಪ್ರಯತ್ನ ಮಾಡಿದಾಗ, ಗಾರ್ಡ್‌ನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.