ಮನೆಯಲ್ಲಿ ಬಾಂಬ್​ ​ಸ್ಫೋಟ: ಆರು ಜನರ ಸಾವು, 8 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಮನೆಯಲ್ಲಿ ಬಾಂಬ್​ ತಯಾರಿಕೆ ವೇಳೆ ಅದು ಸ್ಫೋಟಗೊಂಡು ಓರ್ವ ಮಹಿಳೆ ಸೇರಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. ಇನ್ನೂ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಖೈರಾ ಸಮೀಪದ ಖುದೈಬಾಗ್‌ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ದೆ.ಮನೆಯಲ್ಲಿ ಪಟಾಕಿ ಮದ್ದಿನಿಂದ ಬಾಂಬ್​ ತಯಾರಿಸಲಾಗುತ್ತಿತ್ತು ಎನ್ನಲಾಗ್ತಿದೆ. ಈ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ.
ಈ ಸ್ಫೋಟದಿಂದಾಗಿ ಕಾಲ್ತುಳಿತ ಉಂಟಾಗಿ ಹಾಗೂ ಮನೆಯ ಮೇಲ್ಛಾವಣಿ, ಗೋಡೆಗಳು ಕುಸಿದು ಬಿದ್ದಿವೆ. ಪರಿಣಾಮ ಆರು ಜನರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆಯ ವಿಷಯ ಪೊಲೀಸರು ಆರು ಆ್ಯಂಬುಲೆನ್ಸ್​ಗಳು ಮತ್ತು ಪರಿಹಾರ ಹಾಗೂ ರಕ್ಷಣಾ ತಂಡಗಳೊಂದಿಗೆ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಅವಶೇಷಗಳ ಸಿಲುಕಿದ್ದ ಆರು ಜನರ ಶವಗಳನ್ನು ಹೊರತೆಗೆಯಲಾಗಿದೆ.
ಈ ದುರಂತ ಬಾಂಬ್​ ಸ್ಫೋಟದಿಂದಲೇ ಸಂಭವಿಸಿದೆಯೋ ಅಥವಾ ಪಟಾಕಿ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!