Friday, November 21, 2025

ಪಾಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗಲೇ ಸ್ಟೇಡಿಯಂನಲ್ಲಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ.

ಸ್ಫೋಟಕ್ಕೆ ಓರ್ವ ಬಲಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬಜೌರ್ ಜಿಲ್ಲೆಯ ಖಾರ್ ತೆಹ್ಸಿಲ್‌ನಲ್ಲಿರುವ ಕೌಸರ್ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ.

ಬಜೌರ್ ಜಿಲ್ಲಾ ಪೊಲೀಸ್ ಅಧಿಕಾರಿ ವಕಾಸ್ ರಫೀಕ್ ಅವರು ಸುಧಾರಿತ ಸ್ಫೋಟಕ ಸಾಧನದ ಮೂಲಕ ಸ್ಫೋಟವನ್ನು ನಡೆಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಮೈದಾನದಲ್ಲಿ ದಟ್ಟವಾದ ಹೊಗೆ ಏಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ

error: Content is protected !!