ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಜಾಮಿಲ್ ಶರೀಫ್ನನ್ನು 7 ದಿನಗಳ ಕಾಲ ಎನ್ಐಎ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮಾ.1ರಂದು ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಸ್ಫೋಟ ಮಾಡಲಾಗಿತ್ತು. ಇದರಿಂದ ಇಡೀ ಬೆಂಗಳೂರು ನಗರವೇ ಬೆಚ್ಚಿ ಬಿದ್ದಿತ್ತು.
ಈ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಗೆ ವಹಿಸಲಾಗಿದೆ. ಎನ್ಐಎನಿಂದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಾಂಬ್ ತಯಾರಿಸಿದ ವ್ಯಕ್ತಿಯನ್ನು ಬಂಧಿಸಿ ಶುಕ್ರವಾರ ಬೆಳಗ್ಗೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈತನನ್ನು ಇನ್ನಷ್ಟು ವಿಚಾರಣೆ ಮಾಡುವುದು ಅಗತ್ಯವಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ 7 ದಿನಗಳ ಕಾಲ ಎನ್ಐಎ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ಆರೋಪಿ ಮುಜಾಮಿಲ್ ಷರೀಫ್ ಬಾಂಬ್ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಅಲ್ಲದೆ ಉಳಿದ ಆರೋಪಿಗಳ ಜೊತೆ ಸಂಪರ್ಕದ ಹೊಂದಿದ್ದ ಬಗ್ಗೆಯೂ ಎನ್ಐಎ ಮಾಹಿತಿ ಸಂಗ್ರಹ ಮಾಡಿತ್ತು. ಇವರೆಲ್ಲರೂ ಡಾರ್ಕ್ ವೆಬ್ ಸೈಟ್ ಮೂಲಕ ಸಂಪರ್ಕ ಮಾಡುತ್ತಿದ್ದರು. ಈಗ ಎನ್ಐಎ ಅಧಿಕಾರಿಗಳು ಡಾರ್ಕ್ ವೆಬ್ಸೈಟ್ ಮೂಲಕವೇ ಸಾಕ್ಷಿಗಳ ಸಂಪರ್ಕ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಜೊತೆಗೆ ಆರೋಪಿಗಳ ಮಧ್ಯೆ ನಡೆದಿದ್ದ ಹಣಕಾಸಿನ ವ್ಯವಹಾರದ ಸಾಕ್ಷಿಗಳ ಸಂಗ್ರಹ ಮಾಡಲಾಗಿದೆ.
ಇನ್ನು ಒಂದು ವಾರಗಳ ಕಾಲ ಆರೋಪಿಯನ್ನು ವಶಕ್ಕೆ ಪಡೆದಿರುವ ಎನ್ಐಎ ಪೊಲೀಸರು ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಹಿಂದಿರುವ ಷಡ್ಯಂತ್ರದ ಸಂಬಂಧ ವಿಚಾರಣೆ ನಡೆಸಲಿದ್ದಾರೆ. ಇದಕ್ಕೆ 7 ದಿನಗಳ ಕಾಲಾವಕಾಶ ನೀಡಲಾಗಿದೆ. ನೀಡಿದೆ.