ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ: 10 ವಿದ್ಯಾರ್ಥಿಗಳು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಸಮಂಗನ್ ಪ್ರಾಂತ್ಯದ ರಾಜಧಾನಿ ಅಯ್ಬಕ್‌ನಲ್ಲಿರುವ ಮದರಸಾದಲ್ಲಿ ಪ್ರಾರ್ಥನೆ ಸಮಯದಲ್ಲಿಯೇ ಸ್ಫೋಟ ಸಂಭವಿಸಿದೆ. ಶಾಲೆಗೆ ಕಳುಹಿಸಿದ್ದ ಮಕ್ಕಳು ಮರಳಿ ಬಾರದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

 

ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ. ತಾಲಿಬಾನ್ ಮಾಧ್ಯಮಗಳಿಗೆ ವಿತರಿಸಿ ವಿಡಿಯೋದಲ್ಲಿ ಸ್ಫೋಟದ ಸ್ಥಳ, ಭಗ್ನಾವೇಶಗಳು, ಚಾಪೆ, ರಕ್ತದ ಕಲೆಗಳು, ಚಪ್ಪಲಿಗಳನ್ನು ಕಾಣಬಹುದಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಫಿ ಟಕೋರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!