ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ: ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಇದಕ್ಕೂ ಮೊದಲು ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಬಾಂಬ್ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದರು. ಕೆಲವು ಕಾರ್ಮಿಕರು ಸ್ಥಳೀಯ ಟಿಎಂಸಿ ನಾಯಕರ ನಿರ್ಮಾಣ ಹಂತದ ಮನೆಯಲ್ಲಿ ಕೆಲಸ ಮಾಡುತ್ತಿದ್ದರು.

ಕೆಲವು ಬಾಂಬ್‌ಗಳನ್ನು ಮನೆಯ ಮೆಟ್ಟಿಲುಗಳ ಕೆಳಗೆ ಇಡಲಾಗಿತ್ತು. ಕಾರ್ಮಿಕರು ಬಾಂಬ್ ಸ್ಪರ್ಶಿಸಿ ತಕ್ಷಣ ಭಾರೀ ಶಬ್ದದೊಂದಿಗೆ ದೊಡ್ಡ ಸ್ಫೋಟ ಸಂಭವಿಸಿತ್ತು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!