Sunday, September 7, 2025

ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯ ವೇಳೆ ಬಾಂಬ್ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ವೇಳೆಯೇ ಕ್ರಿಕೆಟ್ ಮೈದಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳು ನೀಡಿರುವ ಮಾಹಿತಿಯ ಪ್ರಕಾರ, ಈ ಸ್ಫೋಟ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಜಿಲ್ಲೆಯ ಖಾರ್ ತಹಸೀಲ್ ಪ್ರದೇಶದ ಕ್ರಿಕೆಟ್ ಮೈದಾನದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಹೇಳಿಕೆಯ ಪ್ರಕಾರ, ಪಕ್ಕಾ ಪ್ಲಾನ್ ಮಾಡಿಕೊಂಡೇ ಈ ಬಾಂಬ್ ಸ್ಫೋಟ ನಡೆಸಲಾಗಿದೆ.

ಘಟನೆ ಸಂಭವಿಸಿದ ಕ್ಷಣದಲ್ಲಿ ಮೈದಾನದಲ್ಲಿ ಆಟಗಾರರು ಪಂದ್ಯವಾಡುತ್ತಿದ್ದು, ಪ್ರೇಕ್ಷಕರು ಪಂದ್ಯ ವೀಕ್ಷಿಸುತ್ತಿದ್ದರು. ಸ್ಫೋಟದ ತೀವ್ರತೆಯಿಂದಾಗಿ ಭಯಭೀತರಾದ ಆಟಗಾರರು ಮತ್ತು ಪ್ರೇಕ್ಷಕರು ಮೈದಾನದಿಂದ ಓಡಿ ಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಸದ್ಯ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಸ್ಫೋಟದ ಭೀಕರತೆಯ ಚಿತ್ರಣವನ್ನು ತೋರಿಸುತ್ತಿವೆ.

ಇದಕ್ಕೂ ಮುನ್ನ, ಕೇವಲ ಒಂದು ವಾರದ ಹಿಂದಷ್ಟೇ ಇದೇ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿರುವ ಪೊಲೀಸ್ ಠಾಣೆಯ ಮೇಲೆ ಕ್ವಾಡ್‌ಕಾಪ್ಟರ್ ಮೂಲಕ ದಾಳಿ ನಡೆದಿದೆ. ಆ ದಾಳಿಯಲ್ಲಿ ಒಬ್ಬ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಹಲವರು ಗಾಯಗೊಂಡಿದ್ದರು. ಈಗ ಮತ್ತೊಮ್ಮೆ ಇದೇ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿರುವುದರಿಂದ ಜನರಲ್ಲಿ ಗಾಬರಿ ಹುಟ್ಟಿಸಿದೆ.

ಇದನ್ನೂ ಓದಿ