ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್‌ನಲ್ಲಿ 2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ 49 ಆರೋಪಿಗಳ ಪೈಕಿ 38 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
ಯುಎಪಿಎಸ್ ಪ್ರಕಾರ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗಿದ್ದು, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರು, ಅಹಮದಾಬಾದ್, ಭೋಪಾಲ್, ಗಯಾ ಮತ್ತು ದೇಶದ ಇತರೆ ಭಾಗಗಳ ಜೈಲಿನಿಂದ ಅಪರಾಧಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಜುಲೈ 26,2008 ರಂದು ಅಹಮದಾಬಾದ್ ನಗರದ ಸರಣಿ ಸ್ಫೋಟದಲ್ಲಿ 56 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
2008 Ahmedabad serial bomb blast case | A special court pronounces death sentence to 38 out of 49 convicts pic.twitter.com/CtcEWGze2z
— ANI (@ANI) February 18, 2022