ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡಿನ ಧನ್‌ಬಾದಿನಲ್ಲಿ ಮಾರುಕಟ್ಟೆಯೊಂದರಲ್ಲಿ ಬೈಕ್ ಕ್ಯಾರಿಯರ್ ನಲ್ಲಿ ಬಾಂಬ್ ಸ್ಫೋಟಗೊಂಡ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವ್ಯಕ್ತಿ ಓರ್ವ ತನ್ನ ಬೈಕ್‌ಗೆ ಅಳವಡಿಸಲಾಗಿದ್ದ ಲಗೇಜ್ ಕ್ಯಾರಿಯರ್‌ನಲ್ಲಿ ಬಾಂಬ್ ಇಟ್ಟು ತರಕಾರಿ ಖರೀದಿಸಲು ಮಾರುಕಟ್ಟೆಗೆ ತೆರಳಿದ್ದರು. ಈ ವೇಳೆ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದಲ್ಲಿ ಮೂವರು ತರಕಾರಿ ವ್ಯಾಪಾರಿಗಳು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಶಹೀದ್ ನಿರ್ಮಲ್ ಮಹತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.