ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾ ಬಳಿ ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಮದರಸಾದೊಳಗೆ ಬಿದ್ದಿದ್ದ ಬಾಂಬ್ ಅನ್ನು ಅಲ್ಲಿದ್ದ ವಿದ್ಯಾರ್ಥಿಯೊಬ್ಬ ಚೆಂಡು ಎಂದು ತಿಳಿದು ಎಸೆದಿದ್ದಾನೆ.
ಘಟನೆಯಲ್ಲಿ ಮೌಲ್ವಿ ಹಾಗೂ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಂಬ್ ತಯಾರಿಸುವಾಗ ಸ್ಫೋಟ ಸಂಭವಿಸಿದ್ದು, ಇಮಾಮುದ್ದೀನ್ ಮತ್ತು ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.