ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. 80 ಮಂದಿ ಗಾಯಗೊಂಡಿದ್ದಾರೆ.
ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (JUI-F) ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ . ಘಟನೆಯಲ್ಲಿ ಗಾಯಗೊಂಡ ಸುಮಾರು 80 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಕ್ಷದ ಹಿರಿಯ ನಾಯಕನ ಆಗಮನಕ್ಕೂ ಮುನ್ನ ಸ್ಫೋಟ ಸಂಭವಿಸಿದೆ ಎಂದು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ಮಹಾನಿರೀಕ್ಷಕ ಅಖ್ತರ್ ಹಯಾತ್ ಗಂದಾಪುರ್ ಹೇಳಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಮುಖ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಜೀರ್ ಖಾನ್ ಹೇಳಿದ್ದಾರೆ.
ಮೌಲಾನಾ ಫಜ್ಲುರ್ ರೆಹಮಾನ್ ಅವರನ್ನು ತಾಲಿಬಾನ್ ಪರ ಧರ್ಮಗುರು ಎಂದು ಪರಿಗಣಿಸಲಾಗಿದೆ. ಅವರ ರಾಜಕೀಯ ಪಕ್ಷವು ಇಸ್ಲಾಮಾಬಾದ್‌ನಲ್ಲಿ ಸಮ್ಮಿಶ್ರ ಸರ್ಕಾರದ ಭಾಗವಾಗಿದೆ. ಅಕ್ಟೋಬರ್ ವೇಳೆಗೆ ನಡೆಯಲಿರುವ ಚುನಾವಣೆಗೆ ಬೆಂಬಲಿಗರನ್ನು ಸಜ್ಜುಗೊಳಿಸಲು ದೇಶಾದ್ಯಂತ ಸಭೆಗಳನ್ನು ಆಯೋಜಿಸಲಾಗಿದೆ.