ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಜನರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ನಂತರ 16 ಗಾಯಾಳುಗಳನ್ನು ಆಸ್ಪತ್ರೆಗೆ ತರಲಾಯಿತು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ತಿಳಿಸಿದೆ.

ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!