Friday, June 2, 2023

Latest Posts

BIG NEWS| ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೋಟಾರ್‌ ಸೈಕಲ್ ಬಾಂಬ್ ಸ್ಫೋಟಗೊಂಡಿದ್ದು, ಒಬ್ಬರು ಸಾವನ್ನಪ್ಪಿ ಮತ್ತು ಮೂವರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ. ಬುಧವಾರ ಮೋಟಾರ್ ಸೈಕಲ್ ರಿಪೇರಿ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ.

ಪೇಶಾವರ್ ಪಾಕಿಸ್ತಾನದ ಆರನೇ ದೊಡ್ಡ ನಗರ, ಖೈಬರ್ ಪಖ್ತುನ್ಖ್ವಾ ರಾಜಧಾನಿ. ಸ್ಫೋಟದ ಬಗೆಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ. “ಪ್ರಾಥಮಿಕ ವರದಿಗಳ ಪ್ರಕಾರ ಮೋಟಾರ್ ಸೈಕಲ್ ರಿಪೇರಿ ಮಾಡುವಾಗ ಸ್ಫೋಟ ಸಂಭವಿಸಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೇಶಾವರದ ರಿಂಗ್ ರಸ್ತೆಯಲ್ಲಿರುವ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಗಾಯಗೊಂಡ ಮೂವರಲ್ಲಿ ಒಬ್ಬರು ಮೋಟಾರು ಸೈಕಲ್‌ನ ಮಾಲೀಕರಾಗಿದ್ದು, ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಲ್ಲಿ 200 ಗ್ರಾಂ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಲಾಗಿದೆ ಎಂದು ಬಾಂಬ್ ನಿಷ್ಕ್ರಿಯ ತಂಡ ಹೇಳಿಕೆಯಲ್ಲಿ ತಿಳಿಸಿದೆ. ಸ್ಫೋಟದ ತನಿಖೆ ನಡೆಯುತ್ತಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!