ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ , ರಾಮೇಶ್ವರಂ ಕೆಫೆಗೆ ಮಧ್ಯಾಹ್ನದ ವೇಳೆಯಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಹೋಗಿದ್ದಾನೆ. ಆತನ ಚಹರೆ ಕೆಫೆಯಲ್ಲಿರುವಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದರು.
ಮಧ್ಯಾಹ್ನ 12ರ ಸುಮಾರಿ 30 ವರ್ಷದ ವ್ಯಕ್ತಿ ಬ್ಯಾಗ್ ನಲ್ಲಿ ತಂದಿದ್ದಂತ ಸ್ಪೋಟಕವನ್ನು ರಾಮೇಶ್ವರಂ ಕೆಫೆಯಲ್ಲಿ ಇರಿಸಿದ್ದಾರೆ. ನಂತ್ರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಕೂಡ ಸೇವಿಸಿ ಹೋಗಿದ್ದಾನೆ. ಟೈಮರ್ ಇಟ್ಟು ಮಧ್ಯಾಹ್ನ 12.55ರ ವೇಳೆಯಲ್ಲಿ ಕಡಿಮೆ ತೀವ್ರತೆಯಲ್ಲಿ ಬಾಂಬ್ ಸ್ಪೋಟಿಸಲಾಗಿದೆ ಎಂದು ತಿಳಿಸಿದರು.
ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಆರೋಪಿಯ ಪತ್ತೆಗೆ ಪೊಲೀಸರು ಕ್ರಮ ವಹಿಸಿದ್ದಾರೆ. ಈ ಸ್ಪೋಟಕದಲ್ಲಿ ಗ್ರಾಹಕರು, ಹೋಟೆಲ್ ಸಿಬ್ಬಂದಿ ಸೇರಿದಂತೆ 10 ಮಂದಿ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಿಲ್ಲ ಎಂದರು.